ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ಮುಂದುವರಿಕೆ


ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ರಾಜ್ಯ ಸರ್ಕಾರ ಈಗಾಗಲೇ 14 ದಿನಗಳ ಜನತಾ ಕಪ್ರ್ಯೂ ಜಾರಿ ಮಾಡಿದೆ. 14 ದಿನಗಳ ಜನತಾ ಕಪ್ರ್ಯೂ ಅವಧಿಯಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇದ್ದರೆ, ಜನತಾ ಕಪ್ರ್ಯೂ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರದಿದ್ದರೆ ಪರಿಸ್ಥಿತಿ ನೋಡಿಕೊಂಡು ಕಪ್ರ್ಯೂ ಮುಂದುವರಿಸುವ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪನವರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.