ಕೋವಿಡ್ ಆರೈಕೆ ಕೇಂದ್ರಕ್ಕೆ ಆಯುಕ್ತರ ಅನುಮತಿ ಕಡ್ಡಾಯ


ಕೋವಿಡ್ ಆರೈಕೆ ಕೇಂದ್ರಕ್ಕೆ ಆಯುಕ್ತರ ಅನುಮತಿ ಕಡ್ಡಾಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೋವಿಡ್ ಆರೈಕೆ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಬೇಕಾಗಿದೆ.
ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಅಪಾರ್ಟ್‍ಮೆಂಟ್ ನಿವಾಸಿಗಳ ಸಂಘ, ಕಂಪನಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಅವರದೇ ಆವರಣದಲ್ಲಿ ಇಂತಹ ಕೇಂದ್ರಗಳನ್ನು ತೆರೆಯಲು ಆಸಕ್ತಿ ವಹಿಸುತ್ತಿವೆ.

ಈ ಕೇಂದ್ರಗಳನ್ನು ತೆರೆಯಲು ಬಯಸುವವರು ಆಯಾ ವಲಯ ಆಯುಕ್ತರ ಅನುಮತಿ ಪಡೆಯಬೇಕು. ಸಿಸಿಸಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ವಯ ಕೇಂದ್ರಗಳನ್ನು ನಿರ್ವಹಿಸಬೇಕು ಎಂದು ಬಿಬಿಎಂಪಿ ಹೇಳಿದೆ.