ಇಸ್ರೇಲ್ ನೂತನ ಪ್ರಧಾನಿಗೆ ಶುಭಕೋರಿದ ಮೋದಿ


ಇಸ್ರೇಲ್ ನೂತನ ಪ್ರಧಾನಿಗೆ ಶುಭಕೋರಿದ ಮೋದಿ

ನವದೆಹಲಿ: ಇಸ್ರೇಲ್‍ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ನಫ್ತಾಲಿ ಬೆನ್ನೆಟ್ಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಕೆ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭಾರತ ಮತ್ತು ಇಸ್ರೇಲ್ ಉಭಯ ದೇಶಗಳ ನಡುವಿನ ಸಂಬಂಧವನ್ನು ಗಾಢವಾಗಿಸಲು ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30 ವರ್ಷಗಳನ್ನು ನಾವು ಆಚರಿಸುತ್ತಿದ್ದಂತೆ, ನಿಮ್ಮನ್ನು ಭೇಟಿ ಮಾಡಲು ಮತ್ತು ನಮ್ಮ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಗಾಢವಾಗಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.