ನಮ್ಮ ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ


ನಮ್ಮ ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ

ಬೆಂಗಳೂರು:  ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಆಗಸ್ಟ್ 16ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಇಂದಿನಿಂದ ಪ್ರತಿದಿನ ರಾತ್ರಿ 8 ಗಂಟೆವರೆಗೆ ಮಾತ್ರ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಅಂತಾ ನಮ್ಮ ಮೆಟ್ರೋದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯಾದಂತ ನೈಟ್ ಕರ್ಫ್ಯೂ ಪ್ರತಿದಿನ ರಾತ್ರಿ 10ರ ಬದಲಿಗೆ 9ರಿಂದ ಬೆಳಗ್ಗೆ 5ರ ವರೆಗೆ ಜಾರಿ ಇರಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಅವಧಿಯಲ್ಲೂ ಸಹ ಬದಲಾವಣೆ ಮಾಡಲಾಗಿದೆ. ಈಗಾಗಲೇ ನಷ್ಟದಲ್ಲಿರುವ ನಮ್ಮ ಮೆಟ್ರೋ ಗೆ ಗಾಯದ ಮೇಲೆ ಬರೆ ಎಳೆದಂತಾದೆ. ಇನ್ನೂ ನೈಟ್ ಕರ್ಫ್ಯೂ ಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.