ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ..!?


ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ..!?

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಹೆಚ್ಚಳವಾಗುತ್ತಿದ್ದು, ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ತರಲು ಶೀಘ್ರದಲ್ಲೇ ಮತ್ತೆ ಕಠಿಣ ನಿಯಮಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೆ ತಂದಿದೆ. ಇದರ ಜೊತೆಗೆ ಬೆಂಗಳೂರಿನಲ್ಲಿ ವಿಕೇಂಡ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಮದುವೆ ಸಮಾರಂಭಗಳಲ್ಲಿ ಕೇವಲ 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೋಟೆಲ್ ಗಳಲ್ಲಿ ಶೇ. 50 ರಷ್ಟು ಗ್ರಾಹಕರಿಗೆ, ಬಸ್ ಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ ಮತ್ತು ಫ್ಯಾಕ್ಟರಿ ಮತ್ತು ಇಂಡಸ್ಟ್ರಿಗಳಲ್ಲಿ ಶೇ. 50 ರಷ್ಟು ಕೆಲಸಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಾರದ ಅಂತ್ಯಕ್ಕೆ ಸೋಂಕಿನ ಪ್ರಮಾಣ 500 ರ ಗಡಿ ದಾಟಿದರೆ ವಿಕೇಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆಯಿದೆ. ಇಲ್ಲದಿದ್ದರೆ ಕಠಿಣ ನಿಯಮ ಜಾರಿಯಾಗಬಹುದು ಎಂದು ಹೇಳಲಾಗುತ್ತಿದೆ.