ಬೆಂಗಳೂರಿನಲ್ಲಿ ಮನೆ ಮನೆಗೆ ಬರ್ತಾರೆ ಡಾಕ್ಟರ್


ಬೆಂಗಳೂರಿನಲ್ಲಿ ಮನೆ ಮನೆಗೆ ಬರ್ತಾರೆ ಡಾಕ್ಟರ್

ಬೆಂಗಳೂರು : ಬೊಮ್ಮನಹಳ್ಳಿ, ಮಹದೇವಪುರ ವಾರ್ಡ್ ಗಳ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಹೀಗಾಗಿ ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ 108 ವೈದ್ಯರ ತಂಡವನ್ನು ರಚಿಸಲಿದ್ದೇವೆ. ಪ್ರತಿ ಮನೆ ಮನೆಗೂ ಭೇಟಿ ನೀಡೋದಕ್ಕೆ ಆರೋಗ್ಯ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಬೆಂಗಳೂರಿನ ಕೊರೋನಾ 3ನೇ ಅಲೆಯ ನಿಯಂತ್ರಣ ಕುರಿತಂತೆ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3 ಕೇಸ್ ಪತ್ತೆಯಾದ್ರೂ ಪೂರ್ತಿ ಬಡಾವಣೆಯ ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪ್ರತಿ ಮನೆ ಮನೆಗೆ ತೆರಳಿ ಆರೋಗ್ಯ ಸಿಬ್ಬಂದಿಗಳು ಪರೀಕ್ಷೆ ಮಾಡಲಿದ್ದಾರೆ. ಕಾರ್ಪೋರೇಷನ್ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಲಿದ್ದಾರೆ. ಈ ಮೂಲಕ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಲಿದ್ದಾರೆ. ಅವರಿಗೆ ವೈದ್ಯಕೀಯ ಸೇವೆ ಅಗತ್ಯವಿದ್ದರೇ ನೆರವಾಗಲಿದ್ದಾರೆ ಎಂಬುದಾಗಿ ತಿಳಿಸಿದರು.