ಸೇನೆಯನ್ನು ಹಿಂಪಡೆದ ನಿರ್ಧಾರ ಸರಿಯಾಗಿದೆ


ಸೇನೆಯನ್ನು ಹಿಂಪಡೆದ ನಿರ್ಧಾರ ಸರಿಯಾಗಿದೆ

ತಾಲಿಬಾನ್‍ಗಳ ಅಟ್ಟಹಾಸದ ನಡುವೆ ಅಫ್ಘಾನಿಸ್ತಾನದಿಂದ ಅಮೆರಿಕ ಪಡೆಗಳನ್ನು ಹಿಂತೆಗೆದುಕೊಳ್ಳುವ ತಮ್ಮ ನಿರ್ಧಾರವನ್ನು ಸರಿಯಾದದ್ದು ಎಂದು ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ತಾಲಿಬಾನ್ ಕಾಬೂಲ್‍ಅನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಡಿದ ಬಿಡೆನ್, ಸೈನ್ಯ ಹಿಂತೆಗೆದುಕೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದಲ್ಲಿ ಈಗಿನ ಪರಿಸ್ಥಿತಿಗೆ ಅಲ್ಲಿನ ನಾಯಕರೇ ಹೊಣೆ ಅಫ್ಘಾನಿಸ್ತಾನದಲ್ಲಿ ನಾವು ಇಂಥಹ ಪರಿಸ್ಥಿತಿಯನ್ನು ನಿರೀಕ್ಷೆ ಮಾಡಿದ್ದೆವು. ಆದರೆ ಆ ಪರಿಸ್ಥಿತಿ ಇಷ್ಟು ಬೇಗ ಬರುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆಫ್ಘನ್ ನಾಯಕರೇ ಆ ದೇಶವನ್ನು ತಾಲಿಬಾನಿಗಳಿಗೆ ಬಿಟ್ಟುಕೊಟ್ಟು, ದೇಶವನ್ನು ತೊರೆದಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಸಾಕಷ್ಟು ಬೇಸರವನ್ನು ತಂದಿದೆ. ಆದರೆ. ನನ್ನ ನಿರ್ಧಾರದ ಕುರಿತು ಯಾವುದೇ ರೀತಿಯ ವಿಷಾದವಿಲ್ಲ ಎಂದು ಹೇಳಿದ್ದಾರೆ.