ಅಣ್ಣಾತೆ ಚಿತ್ರ: ನಾಳೆ ರಿಲೀಸ್


ಅಣ್ಣಾತೆ ಚಿತ್ರ: ನಾಳೆ ರಿಲೀಸ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಚಿತ್ರ ಅಣ್ಣಾತೆ ನವೆಂಬರ್ 4 ರಂದು ವಿಶ್ವದಾದ್ಯಂತ ತೆರೆಕಾಣಲಿದ್ದು, ಬೆಳಗಿನಜಾವ 4 ಗಂಟೆಗೆ ಫ್ಯಾನ್ಸ್ ಶೋ ಆಯೋಜಿಸಲಾಗಿದೆ.

 

ನಯನತಾರಾ, ಖುಷ್ಬೂ, ಮೀನಾ, ಕೀರ್ತಿ ಸುರೇಶ್ ಸೇರಿದಂತೆ ಬಹುದೊಡ್ಡ ತಾರಾಗಣ ಹೊಂದಿರುವ ಈ ಚಿತ್ರವನ್ನು ಸಿರುತ್ತೈ ಸಿವ ನಿರ್ದೇಶನ ಮಾಡಿದ್ದು, ಈಗಾಗಲೇ ಬಿಡುಗಡೆಯಾಗಿರುವ ಅಣ್ಣಾತೆ ಹಾಡುಗಳು ಸೂಪರ್ ಹಿಟ್ ಆಗಿವೆ. ಹಾಗೂ ಟ್ರೇಲರ್ ನೋಡಿದ ಅಭಿಮಾನಿಗಳು ಸಿನಿರಸಿಕರಲ್ಲಿ ಚಿತ್ರದ ಕುರಿತಾಗಿ ನಿರೀಕ್ಷೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಹಾಗೇಯೆ ತಮಿಳುನಾಡು ಸರ್ಕಾರ ನವೆಂಬರ್ 1 ರಿಂದ ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದ್ದು, ಪುದುಕೋಟೆ, ಚೆನ್ನೈ, ತೂತುಕುಡಿ ಸೇರಿದಂತೆ ಹಲವು ಕಡೆಗಳಲ್ಲಿ ನಾಳೆ ಬೆಳಗಿನಜಾವ 4 ಗಂಟೆಗೆ ಅಣ್ಣಾತೆ ಪ್ರದರ್ಶನ ಆರಂಭವಾಗಲಿದ್ದು, ಅಣ್ಣಾತೆ ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗಲಿದೆ.