ಕಿವೀಸ್ ಸರಣಿಯಿಂದ ರಾಹುಲ್ ಔಟ್.!


ಕಿವೀಸ್ ಸರಣಿಯಿಂದ ರಾಹುಲ್ ಔಟ್.!

ನವೆಂಬರ್ 25 ರಿಂದ ಕಾನ್ಪುರದಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಭಾರಿ ಆಘಾತ ಎದುರಾಗಿದ್ದು,ಕೆಎಲ್ ರಾಹುಲ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಗಾಯದ ಕಾರಣ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಕೆಎಲ್ ರಾಹುಲ್ ಮೊದಲ ಟೆಸ್ಟ್ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಅಭ್ಯಾಸದ ವೇಳೆ ಬಹುತೇಕ ಎಲ್ಲಾ ಆಟಗಾರರು ಭಾಗವಹಿಸಿದ್ದರು. ಇದಾಗ್ಯೂ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮಾತ್ರ ಕಂಡು ಬಂದಿರಲಿಲ್ಲ.

ಕೆಎಲ್ ರಾಹುಲ್ ಗಾಯದ ಸ್ವರೂಪವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಹೀಗಾಗಿ ಅವರು ಅಭ್ಯಾಸದಿಂದ ಹೊರಗುಳಿದಿದ್ದಾರೆ. ಗಂಭೀರ ಗಾಯವಾಗಿರುವ ಕಾರಣ, ಅವರು 2 ಪಂದ್ಯಗಳ ಟೆಸ್ಟ್ ಸರಣಿ ಆಡುವುದು ಕೂಡ ಅನುಮಾನ ಎನ್ನಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಮಯಾಂಕ್ ಅಗರ್ವಾಲ್ ಹಾಗೂ ಶುಭಮನ್ ಗಿಲ್ ಅವರು ಇನಿಂಗ್ಸ್? ಆರಂಭಿಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಿಂದ ಈಗಾಗಲೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ರಾಂತಿಯ ಕಾರಣ ಹೊರಗುಳಿದಿದ್ದಾರೆ. ಕೊಹ್ಲಿ 2ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿದ್ದು, ಹೀಗಾಗಿ ಮೊದಲ ಪಂದ್ಯದಲ್ಲಿ ನಾಯಕನಾಗಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಇದೀಗ ಕೆಎಲ್ ರಾಹುಲ್ ಅವರು ಕೂಡ ಗಾಯಗೊಂಡಿದ್ದು, ಇದರೊಂದಿಗೆ ಮತ್ತೋರ್ವ ಅನುಭವಿ ಆಟಗಾರ ಸರಣಿಯಿಂದ ಹೊರಗುಳಿಯುವಂತಾಗಿದೆ.

ಕೆಎಲ್ ರಾಹುಲ್ ಅವರ ಸ್ಥಾನದಲ್ಲಿ ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರಿಗೆ ಬುಲಾವ್ ನೀಡಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಸಾಧ್ಯತೆ ಕೂಡ ಇದೆ. ಇನ್ನು ತಂಡದಲ್ಲಿ ಶ್ರೇಯಸ್ ಅಯ್ಯರ್ ಕೂಡ ಇದ್ದು, ಅವರು ಸಹ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಆಟಗಾರ. ಹೀಗಾಗಿ ಕಾನ್ಪುರ ಟೆಸ್ಟ್?ನಲ್ಲಿ ಯಾರಿಗೆ ಚಾನ್ಸ್? ಸಿಗಲಿದೆ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ.