ಲಾಲು ಪ್ರಸಾದ್ ಆಸ್ಪತ್ರೆಗೆ ದಾಖಲು.!


ಲಾಲು ಪ್ರಸಾದ್ ಆಸ್ಪತ್ರೆಗೆ ದಾಖಲು.!

 

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‍ಐ ಸುದ್ದಿಸಂಸ್ಥೆ ವರದಿ ಮಾಡಿದೆ.

 

ಮೇವು ಹಗರಣಕ್ಕೆ ಸಂಬಂಧಿಸಿದ ದುಮ್ಕಾ ಖಜಾನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಾಲೂ ಪ್ರಸಾದ್ ಜ್ವರ ಹಾಗೂ ದಣಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಅವರ ಸ್ಥಿತಿ ಗಂಭೀರವಾಗಿಲ್ಲದಿದ್ದರೂ ರಕ್ತ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ಹಾಗೇಯೆ 90ರ ದಶಕದ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಅವರು ಪಾಟ್ನಾಕ್ಕೆ ತೆರಳಿದ್ದರು.