ವಿಜಯ್ ಮಲ್ಯ ಗಡಿಪಾರಿಗೆ ಕೋರ್ಟ್ ಆದೇಶ


ವಿಜಯ್ ಮಲ್ಯ ಗಡಿಪಾರಿಗೆ ಕೋರ್ಟ್ ಆದೇಶ

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶ ನೀಡಿದ್ದು, ವಿಜಯ್ ಮಲ್ಯ ಗಡಿಪಾರು ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ಹಣಕಾಸಿನ ವಿಚಾರದಲ್ಲಿ ಹಾಗೂ ವಂಚನೆಗೆ ಸಂಬಂಧಪಟ್ಟಂತೆ ಮಲ್ಯ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಗಳಿದ್ದು ಗಡಿಪಾರು ಮಾಡಲು ಆದೇಶ ನೀಡಿದೆ.

ಮಲ್ಯ ವಿರುದ್ದ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಸಂಬಂಧಪಟ್ಟಂತೆ ಮಲ್ಯ ಇರೋದೆ ಇರೋದನ್ನು ಗಮನಿಸಿದ ಸುಪ್ರಿಂಕೋರ್ಟ್, ಆತನನ್ನು ಭಾರತಕ್ಕೆ ಹಸ್ತಾಂತರಿಸುವವರೆಗೆ ನಾವು ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಅಂತ ಹೇಳಿ, ವಿಚಾರಣೆಯನ್ನು, ಜನವರಿ 18, 22 ರಂದು ಮುಂದೂಡಿತು.

ನ್ಯಾಯಾಲಯವು ಈ ವಿಷಯದಲ್ಲಿ ಸಹಾಯ ಮಾಡಲು ಹಿರಿಯ ವಕೀಲ ಜೈದೀಪ್ ಗುಪ್ತಾ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಿದೆ. 9,000 ಕೋಟಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲದ ಡೀಫಾಲ್ಟ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಲ್ಯ 2016ರ ಮಾರ್ಚ್‍ನಿಂದ ಯುಕೆಯಲ್ಲಿದ್ದಾರೆ. 2017ರ ಏಪ್ರಿಲ್ 18ರಂದು ಸ್ಕಾಟ್‍ಲ್ಯಾಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಜಾಮೀನು ಪಡೆದಿದ್ದಾರೆ.