ಗ್ಯಾಸ್ ಸಿಲಿಂಡರ್ನ ಬೆಲೆ ಹೆಚ್ಚಳ.!
ನವದೆಹಲಿ: ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1ರಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ.
ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ 5 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೋದಿ ಸರ್ಕಾರವು ಪೆಟ್ರೋಲ್, ಡೀಸೆಲ್ನಂತೆ ಗ್ಯಾಸ್ ಅನ್ನು ಕಡಿಮೆ ಮಾಡುತ್ತದೆ ಎಂದು ಜನರು ನಿರೀಕ್ಷಿಸಿದ್ದರು.
ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 103.50 ರೂ.ವರೆಗೆ ಹೆಚ್ಚಿಸಿದ್ದು, ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸದಿರುವುದು ದೊಡ್ಡ ಸಮಾಧಾನದ ವಿಷಯವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.