ರಾಜ್ಯಸಭಾ ಸದಸ್ಯರ ಅಮಾನತು.!


ರಾಜ್ಯಸಭಾ ಸದಸ್ಯರ ಅಮಾನತು.!

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷಗಳ 12 ಸದಸ್ಯರ ಅಮಾನತನ್ನು ಖಂಡಿಸಿ ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇಂದು ಪ್ರತಿಭಟನೆ ನಡೆಸಿವೆ.

 

ಇದೇ ವೇಳೆ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸರ್ಕಾರವು ಒತ್ತಾಯಿಸಿದ್ದು, 12 ಸದಸ್ಯರ ಅಮಾನತಿಗೆ ಸಂಬಂಧಿಸಿದ ವಿಚಾರದಲ್ಲಿ ಪ್ರತಿಪಕ್ಷಗಳ ನಾಯಕರು ಸದನದ ಘನತೆಯನ್ನು ಕುಗ್ಗಿಸಿರುವುದು ವಿಷಾದನೀಯ ಎಂದು ರಾಜ್ಯಸಭೆಯ ಸಭಾನಾಯಕ ಪಿಯೂಷ್ ಗೋಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೇಯೆ ಅಮಾನತುಗೊಂಡಿರುವ ಸದಸ್ಯರು ಸದನದ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದ್ದು, ಇದೇ ವಿಚಾರವಾಗಿ ಪ್ರತಿಪಕ್ಷಗಳು ಮೇಲ್ಮನೆಯಲ್ಲಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.