ರಾಕೇಶ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್.!
ನವದೆಹಲಿ: ಬಹುಕೋಟಿ ರೂಪಾಯಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜೈಲು ಪಾಲಾಗಿರುವ ಉದ್ಯಮಿ ರಾಕೇಶ್ ವಾಧವನ್ ಆರೋಗ್ಯದ ಆಧಾರದ ಮೇಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಾಧವನ್ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ಗೆ ಅನುಮತಿ ನೀಡಿದ್ದು, ಆರೋಪಿಯ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿದ ರೋಹಟಗಿ ಅವರು ಸಾಕಷ್ಟು ಸಮಯದಿಂದ ಜೈಲಿನಲ್ಲಿದ್ದಾರೆ.
ಹಾಗೇಯೆ ನಾನು ನೋಡುತ್ತೇನೆ, ಅವರು ಜೈಲಿನಲ್ಲಿದ್ದಕ್ಕಿಂತ ಹೆಚ್ಚಾಗಿ ಆಸ್ಪತ್ರೆಯಲ್ಲಿದ್ದಾರೆ. ಹೈಕೋರ್ಟ್ಗೆ ಹೋಗಿ ಎಂದು ಪೀಠವು ರೋಹಟಗಿಗೆ ತಿಳಿಸಿದ್ದು, ಸ್ವಲ್ಪ ಸಮಯದ ನಂತರ ಫೈಲ್ ಮಾಡಿ. ಈಗ ಸಾಧ್ಯವಿಲ್ಲ. ಜಾಮೀನು ಅರ್ಜಿಗೆ ಹೈಕೋರ್ಟ್ ಮೆಟ್ಟಿಲೇರಲು ಅರ್ಜಿ ಹಿಂಪಡೆಯಲು ಅನುಮತಿ ನೀಡಲಾಗಿದೆ ಎಂದು ಪೀಠ ಹೇಳಿತು. ಅಕ್ಟೋಬರ್ 14 ರಂದು ಬಾಂಬೆ ಹೈಕೋರ್ಟ್ ವಾಧವನ್ಗೆ ಜಾಮೀನು ನೀಡಲು ನಿರಾಕರಿಸಿದ್ದು, ಈ ಪ್ರಕರಣದಲ್ಲಿ ಹೌಸಿಂಗ್ ಡೆವಲಪ್ಮೆಂಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಚ್ಡಿಐಎಲ್) ಸಂಸ್ಥಾಪಕ ವಾಧವನ್ ಅವರನ್ನು 2019 ರಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿತ್ತು.