ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.!


ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.!

ಶಿವಮೊಗ್ಗ: ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರು ಶಾಪ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಚಿವ ಈಶ್ವರಪ್ಪರ ಸಿಎಂ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಈಶ್ವರಪ್ಪ ಬಾಯಿ ತಪ್ಪಿ ಸತ್ಯ ಹೇಳುತ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು.ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಪೊಲೀಸ್ ಅಧಿಕಾರಿಗಳಿಗೆ ಟೀಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರಿಗೆ ನಿರ್ವಹಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಹಾಗೇಯೆ ಅತಿವೃಷ್ಠಿ ಸಮಸ್ಯೆಯಿದೆ. ಮೂರು ನಾಲ್ಕು ಪಟ್ಟು ಮಳೆ ಹೆಚ್ಚಾಗಿದೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಒಂದು ತಿಂಗಳಾಯ್ತು ಆದರೆ ಇನ್ನೂ ಸರ್ವೇಯಾಗಿಲ್ಲ. ಇದು ರೈತರ ವಿರೋಧಿ ಸರ್ಕಾರ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.