ಸಂಪುಟ ವಿಸ್ತರಣೆ ಬಗ್ಗೆ ಬಿಎಸ್‍ವೈ ಸುಳಿವು


ಸಂಪುಟ ವಿಸ್ತರಣೆ ಬಗ್ಗೆ ಬಿಎಸ್‍ವೈ ಸುಳಿವು

ದಾವಣಗೆರೆ : ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಸುದ್ದಿ ಜೋರಾಗಿದ್ದು, ಶೀಘ್ರವೇ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಿಎಂ ಬಿಎಸ್ ಯಾಡಿಯೂರಪ್ಪ ಸುಳಿವು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ.

ಇನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ ಅವರು, ಈಗಾಗಲೇ ನಾನು ಬಹಿರಂಗವಾಗಿಯೇ ಹೇಳಿದ್ದೇನೆ. ಕುಮಾರಸ್ವಾಮಿ ಅವರೊಂದಿಗೆ ಮಾತಾಡಿರುವೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇಲ್ಲಾ ಅಲ್ಲಿ ಬಿಜೆಪಿಗೆ ಸಹಕಾರ ನೀಡಬೇಕು ಎಂದಿದ್ದೇನೆ. ನೂರಕ್ಕೆ ನೂರು ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.