ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರವು ನಿದ್ರಿಸುತ್ತಿದೆ.!


ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರವು ನಿದ್ರಿಸುತ್ತಿದೆ.!

 

ನವದೆಹಲಿ: ಜನರ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರವು ನಿದ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

 

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕವು, ದೇಶಕ್ಕೆ ಕೊರೊನಾ ಸೋಂಕು ವಕ್ಕರಿಸಿದ ಮೊದಲ ದಿನದಿಂದಲೂ ಜನರನ್ನು ಪ್ರತಿ ಹಂತದಲ್ಲೂ ಜೀವ ಹಿಂಡಿದ್ದು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು. ಬೆಡ್, ವೆಂಟಿಲೇಟರ್, ಆಮ್ಲಜನಕ, ಕೊನೆಗೆ ಸ್ಮಶಾನದಲ್ಲಿಯೂ ಜನರನ್ನು ಸಾಲಿನಲ್ಲಿ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಹಾಗೇಯೆ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಪ್ರಾಣ ಬಿಟ್ಟವರ ಕುಟುಂಬಗಳಿಗೆ 4 ಲಕ್ಷ ಪರಿಹಾರ ನೀಡಲೇಬೇಕು ಎಂದು ಒತ್ತಾಯಿಸಿದೆ ಎಂದು ಹೇಳಿದ್ದಾರೆ.