ಹಿರಿಯ ನಟ ಶಿವರಾಂ ವಿಧಿವಶ.!


ಹಿರಿಯ ನಟ ಶಿವರಾಂ ವಿಧಿವಶ.!

 

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಸಾಧಕರಲ್ಲೊಬ್ಬರಾದ ನಟ, ನಿರ್ಮಾಪಕ ಶಿವರಾಂ ಮನೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ವಿದ್ಯಾಪೀಠ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

 

ಶಿವರಾಂ ಅವರು ನಟ ಮಾತ್ರವಲ್ಲದೆ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಸೇವೆ ಸಲ್ಲಿಸಿದ್ದು, ಅವರು ನಾಯಕನ ಪಾತ್ರಗಳು, ಹಾಸ್ಯ ಪಾತ್ರಗಳು ಮತ್ತು ಪೆÇೀಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹಾಗೂ ತಮ್ಮ ಹಿರಿಯ ಸಹೋದರ, ಎಸ್. ರಾಮನಾಥನ್ ಅವರೊಂದಿಗೆ ಸೇರಿಕೊಂಡು 1972 ರಲ್ಲಿ ಹೃದಯ ಸಂಗಮವನ್ನು ನಿರ್ದೇಶಿಸುವುದರ ಜೊತೆಗೆ ರಾಶಿ ಬ್ರದರ್ಸ್ ಹೆಸರಿನಲ್ಲಿ ಹಲವಾರು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಹಾಗೇಯೆ ಸಹೋದರರು ಕನ್ನಡ ಮಾತ್ರವಲ್ಲದೆ ಬಾಲಿವುಡ್ ಚಲನಚಿತ್ರಗಳನ್ನೂ ನಿರ್ಮಿಸಿದ್ದಾರೆ. ನಟನಾಗಿ, ಶಿವರಾಮ್ ಅವರು ಅನೇಕ ಧೀಮಂತ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆಯನ್ನು ಹೊಂದಿದ್ದು, ಪುಟ್ಟಣ್ಣ ಕಣಗಾಲ್ ಅವರೊಂದಿಗಿನ ಅವರ ಒಡನಾಟವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ. ಮತ್ತು ರಾಜಕುಮಾರ್ ಅಭಿನಯದ ಸಂಗೀತಂ ಶ್ರೀನಿವಾಸ ರಾವ್ ನಿರ್ದೇಶನದ ಎಲ್ಲಾ ಏಳು ಕನ್ನಡ ಚಲನಚಿತ್ರಗಳಲ್ಲಿ ಅವರು ಮುಖ್ಯ ಭಾಗವಾಗಿದ್ದರು.