ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು


ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು

ಬೆಂಗಳೂರು : ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕಾಗಿದೆ. ಆದರೆ ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡಿಸ್ತಿದ್ದಾರೆ. ಸಂಘಪರಿವಾರದ ಪ್ರಯೋಗಾಲಯವೇ ಕರಾವಳಿ. ಸರ್ಕಾರ ಇದಕ್ಕೆಲ್ಲ ಕುಮ್ಮಕ್ಕು ನೀಡಬಾರದು. ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು ಎಂದು ಆರೋಪ ಮಾಡಿದ್ದಾರೆ. ಇನ್ನೂ ಈ ವಿವಾದಕ್ಕೆ ಸಂಬಂಧಪಟ್ಟಂತೆ ಕುಂದಾಪುರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಂದ್ ಮಾಡಿದ್ದು, ಸಂವಿಧಾನ ವಿರೋಧ. ಮಕ್ಕಳ ವಿದ್ಯಾಭ್ಯಾಸವನ್ನು ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.