ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?


ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ಸಧ್ಯ ರಾಜ್ಯದಲ್ಲಿ ಹಿಜಾಬ್ ವಾರ್ ಜೋರಾಗಿದೆ. ಈ ನಡುವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಸೋಮವಾರ ದೆಹಲಿ ಪ್ರವಾಸಕ್ಕೆ ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಫೆ.7 ರಂದು ಬೆಳಗ್ಗೆ ನವದೆಹಲಿಗೆ ತೆರಳಲಿರುವ ಸಿಎಂ ಬೆಳಗ್ಗೆ 9.40 ಕ್ಕೆ ನವದೆಹಲಿ ತಲುಪಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ಸಂಸದರ ಜೊತೆ ಸಭೆ ನಡೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದ ವೇಳೆ ರಾಜ್ಯದ ಸಂಸದರು, ಕಾನೂನು ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ. ಜೊತೆಗೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.